ಚಿಕ್ಕೋಡಿ: ಜೋಡಟ್ಟಿ ಜಾತ್ರೆ: ಪ್ರಸಾದ ಸೇವಿಸಿ ಅಸ್ವಸ್ಥರಾದವರ ಆರೋಗ್ಯ ವಿಚಾರಿಸಿದ ಸಿಇಒ ರಾಹುಲ್ ಶಿಂಧೆ
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜೋಡಟ್ಟಿ ಗ್ರಾಮದಲ್ಲಿ ಪ್ರಸಾದ ಸೇವಿಸಿ ಅಸ್ವಸ್ಥಗೊಂಡಿದ್ದವರನ್ನು ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ಶಿಂಧೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಘಟನೆಯ ತನಿಖೆಗೆ ಮತ್ತು ಗ್ರಾಮದಲ್ಲಿ ಆರೋಗ್ಯ ಶಿಬಿರ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.