ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಹಾಗೂ ರೈಲ್ವೇ ಯೋಜನೆಗಳ ಭೂಸ್ವಾಧಿನ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದು, ಸಭೆಯಲ್ಲಿ 2023-24 ರಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನ ಯೋಜನೆಯಡಿ ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ತಲಾ ರೂ.25 ಕೋಟಿಯಂತೆ ಒಟ್ಟು ರೂ. 3510 ಕೋಟಿ ಬಿಡುಗಡೆಗೆ ಅನುಮೋದನೆ ನೀಡಲಾಗಿತ್ತು. ಇದರಲ್ಲಿ ಈಗಾಗಲೇ ರೂ. 2040 ಕೋಟಿ ಮೊತ್ತದಲ್ಲಿ ಶೇ.58ರಷ್ಟು ಕಾಮಗಾರಿಗಳು ಪೂರ್ಣಗೊಂಡಿದ್ದು, ರೂ.920 ಕೋಟಿ ವೆಚ್ಚ ಭರಿಸಲಾಗಿದೆ. ಇನ್ನೂ ರೂ. 1205 ಕೋಟಿ ಬಿಡುಗಡೆ ಮಾಡಲು ಬೆಳಗಾವಿ ವಿಧಾನ ಮಂಡಲದ ಅಧಿವೇಶನದ ಸಂದರ್ಭದಲ್ಲಿ ಆದೇಶ ನೀಡಲಾಗಿದೆ.