ಅಂಕೋಲ: ಬಾಳೇಗುಳಿ ಬಳಿ ಹಣ್ಣು ಸಾಗಿಸುತ್ತಿದ್ದ ಲಾರಿ ಪಲ್ಟಿ,ಅಪಾರ ಹಾನಿ
ಅಂಕೋಲಾ : ತಾಲೂಕಿನ ಬಾಳೇಗುಳಿ ಗೋಪಾಲಕೃಷ್ಣ ದೇವಾಲಯದ ಬಳಿ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಕಾಶ್ಮೀರಿ ಸೇಬು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ಲಾರಿಯಲ್ಲಿದ್ದ ಸೇಬು ಬಾಕ್ಸ್ ಚೆಲ್ಲಾಪಿಲ್ಲಿಯಾಗಿ ಬಿದ್ದ ಘಟನೆ ನಡೆದಿದೆ. ಇದರಿಂದ ಲಕ್ಷಾಂತರ ರೂಪಾಯಿ ಹಾನಿ ಸಂಭವಿಸಿದೆ. ಕಾಶ್ಮೀರದಿಂದ ಮಂಗಳೂರಿಗೆ ಸೇಬು ಹಣ್ಣಿನ ಬಾಕ್ಸ್ ಗಳನ್ನು ಸಾಗಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ರಸ್ತೆ ತುಂಬ ಸೇಬು ಹಣ್ಣಿನ ಬಾಕ್ಸ್ ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದು ಕೆಲಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ವ್ಯತ್ಯಯ ಉಂಟಾಯಿತು.