ಹೊಳಲ್ಕೆರೆ ಪಟ್ಟಣದ ಎಂ.ಎಂ. ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆ, ಇವರುಗಳ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಆಯೋಜಿಸಿದ್ದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದು ಹೊಳಲ್ಕೆರೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಶಿಕ್ಷಣ ಸಂಯೋಜಕರಾದ ಶ್ರೀಧರ್ ಶೆಟ್ಟಿ ಅವರು ಕಾರ್ಯಕ್ರಮ ಉದ್ಘಾಟಿಸಿದ್ದಾರೆ.