ನೂತನ ಡಿಸಿಸಿ ಬ್ಯಾಂಕ್ ನಿರ್ದೇಶಕನಾಗಿ ಆಯ್ಕೆಯಾದ ಶಾಸಕ ವಿಶ್ವಾಸ ವೈದ್ಯ ಅವರಿಗೆ ಅಭಿನಂದನಾ ಸಮಾರಂಭ ಜರುಗಿತು. ಯರಗಟ್ಟಿ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ವತಿಯಿಂದ, ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಡಿಸಿಸಿ ಬ್ಯಾಂಕ್ ನೂತನ ನಿರ್ದೇಶಕನಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಶನಿವಾರ ಯರಗಟ್ಟಿ ಪಟ್ಟಣದಲ್ಲಿ ಶಾಸಕ ವಿಶ್ವಾಸ ವೈದ್ಯ ಅವರಿಗೆ ಅಭಿನಂದನಾ ಸಮಾರಂಭ ಜರುಗಿತು ಈ ಸಂದರ್ಭದಲ್ಲಿ ಮಾತನಾಡಿದ ಅವರು. ಈ ಆಯ್ಕೆ ನನಗೆ ಲಭಿಸಿರುವ ಅಧಿಕಾರವಲ್ಲ, ಇದು ರೈತ ಬಾಂಧವರು ಮತ್ತು ಸಹಕಾರಿ ಮಿತ್ರರು ನನ್ನ ಮೇಲಿಟ್ಟಿರುವ ಜವಾಬ್ದಾರಿ. ರೈತರ ಆರ್ಥಿಕ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ