ಬಂಗಾರಪೇಟೆ: ಪ್ರಜಾಪ್ರಭುತ್ವ ಹಕ್ಕು ಮತ್ತು ಜವಾಬ್ದಾರಿಗಳನ್ನು ಎಚ್ಚರಿಸುತ್ತದೆ:ಪಟ್ಟಣದಲ್ಲಿ ಶಾಸಕ ಎಸ್ ಎನ್ ನಾರಾಯಣಸ್ವಾಮಿ
ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಇದು ಕೇವಲ ಒಂದು ದಿನದ ಆಚರಣೆಯಾಗಬಾರದು ಬದಲಾಗಿ ಪ್ರತಿಯೊಬ್ಬರು ಹಕ್ಕುಗಳನ್ನು ಪಡೆಯುವ ಮತ್ತು ಜವಾಬ್ದಾರಿಗಳ ಎಚ್ಚರಿಸುವ ಸಂಕೇತವಾಗಬೇಕು ಎಂದು ಶಾಸಕ ಎಸ್ ಎನ್ ನಾರಾಯಣ ಸ್ವಾಮಿ ಅಭಿಪ್ರಾಯಪಟ್ಟರು. ಪಟ್ಟಣದ ಅಂಬೇಡ್ಕರ್ ಪುತ್ಥಳಿಯ ಆವರಣದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚಾರಣೆಯಲ್ಲಿ ಸೋಮವಾರ ಭಾಗವಹಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ಎಂದರೆ ಜನರಿಂದ ಜನರಿಗೋಸ್ಕರವಾಗಿ ಜನರಿಂದ ನೇಮಿಸಲ್ಪಟ್ಟ ಆಡಳಿತಾತ್ಮಕ ವ್ಯವಸ್ಥೆಯಾಗಿದ್ದು ಇದನ್ನು ಬಲಪಡಿಸುವ ನಿಟ್ಟಿನಲಿ ಪ್ರತಿಯೊಬ್ಬರೂ ಸಂಕಲ್ಪ ಮಾಡಬೇಕು ಎಂದರು