ಶಿವಮೊಗ್ಗ: "ತಂಬಾಕು ತ್ಯಜಿಸಿ ಆರೋಗ್ಯವಂತ ಜೀವನ ನಡೆಸಿ" ನಗರದಲ್ಲಿ ತಹಶೀಲ್ದಾರ್ ಗಿರೀಶ್ ತಿಳಿಸಿದರು
ಜಿಲ್ಲಾಡಳಿತ ಹಾಗು ಜಿಲ್ಲಾ ಪಂಚಾಯತ್ ಶಿವಮೊಗ್ಗ ಜಿಲ್ಲಾ ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆ ಹಾಗು ವಿವಿಧ ಸಂಘ-ಸಂಸ್ಥೆಗಳ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ವಿಶ್ವ ತಂಬಾಕು ರಹಿತ ದಿನ ಹಾಗೂ ಗುಲಾಬಿ ಆಂದೋಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ತಂಬಾಕು ತ್ಯಜಿಸಿ ಆರೋಗ್ಯಯುತ ಜೀವನ ನಡೆಸಿ. ತಂಬಾಕಿನಿಂದ ಕೇವಲ ಮಾನವನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದು ಅಷ್ಟೇ ಅಲ್ಲ ಪರಿಸರದ ಮೇಲೂ ಕೂಡ ಅನೇಕ ದುಷ್ಪರಿಣಾಮಗಳನ್ನು ಉಂಟುಮಾಡುತ್ತದೆ ಒಬ್ಬ ಧೂಮಪಾನೀ ತನ್ನ ಜೀವನದಲ್ಲಿ ಐದು ಟನ್ನಷ್ಟು ಕಾರ್ಬನ್ ಡೈಆಕ್ಸೈಡನ್ನು ಹೊರ ಹಾಕುತ್ತಾನೆ ಅಂದರೆ ಬಿಡಿ ಹಾಗೂ ಸಿಗರೇಟ್ ಸೇದುವವರು ಕಾರ್ಬನ್ ಡೈ ಆಕ್ಸೈಡನ್ನು ಬಿಡುಗಡೆ ಮಾಡುವ ಮೂಲಕ ಪರಿಸರದ ಮಾಲಿನ್ಯಕ್ಕೆ ಕಾರಣರಾಗುತ್ತಿದ್ದಾರೆ ಎಂದರು.