ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ 2025-30ನೇ ಸಾಲಿನ ಕೇಂದ್ರ ಸಮಿತಿ ಪಂಚವಾರ್ಷಿಕ ಚುನಾವಣೆಯಲ್ಲಿ ಸಿ.ರಮೇಶ್ ಅವರ ನೇತೃತ್ವದ ಆರ್ ಆರ್ ತಂಡ 2 ಸಾವಿರ ಮತಗಳ ಅಂತರದಿಂದ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನಲೆ ಚಾಮರಾಜನಗರ ಜಿಲ್ಲಾ ಸಮಿತಿ ವತಿಯಿಂದ ನಗರದ ಉಪ ವಿಭಾಗೀಯ ಕಚೇರಿ ಮುಂಭಾಗದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಲಾಯಿತು.