ನಿರಂತರ ಮಳೆಯಿಂದಾಗಿ ತಾಲ್ಲೂಕಿನ ಐತಿಹಾಸಿಕ ಹಿರೇಕೊಳಲೆ ಕೆರೆ ತುಂಬಿ ಕೋಡಿ ಬಿದ್ದ ಹಿನ್ನೆಲೆ ಜಿಲ್ಲೆಯ ಚುನಾಯಿತ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭಾನುವಾರ ಕೆರೆಗೆ ಭಾಗಿನ ಅರ್ಪಿಸಿದರು. ಬಳಿಕ ಶಾಸಕ ಎಚ್.ಡಿ.ತಮ್ಮಯ್ಯ ಮಾತನಾಡಿ, ಚಿಕ್ಕಮಗಳೂರು ನಗರ ಭಾಗಕ್ಕೆ ಕುಡಿಯುವ ನೀರು ಒದಗಿಸುವ ಹಿರೇಕೊಳಲೆ ಕೆರೆ ಜುಲೈನಲ್ಲಿಯೇ ತುಂಬಿ ಕೋಡಿ ಬಿದ್ದಿರುವುದು ಜನತೆ ಹಾಗೂ ರೈತರ ಮೊಗದಲ್ಲಿ ಮಂದಹಾಸ ತಂದಿದೆ ಎಂದರು.