ಬೆಂಗಳೂರು ಉತ್ತರ: ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ: ನಗರದಲ್ಲಿ ಸಿಎಂ
ಕರ್ನಾಟಕದಲ್ಲಿ ಕನ್ನಡದ ವಾತಾವರಣವನ್ನು ನಿರ್ಮಾಣ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ಕನ್ನಡ ಚಳುವಳಿಗಾರರ ಸಮಿತಿ ವತಿಯಿಂದ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಆಯೋಜಿಸಲಾಗಿದ್ದ ಜನರಾಜ್ಯೋತ್ಸವ -2025 ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಯಾವ ಭಾಷೆ ಕಲಿತರೂ ಕನ್ನಡಿಗರಾಗಿಯೇ ಉಳಿಯಬೇಕು. ರಾಜ್ಯದಲ್ಲಿ ಕನ್ನಡ ಕಲಿಯದೆಯೇ ಬದುಕಬಹುದಾದ ವಾತಾವರಣವಿದೆ. ಕನ್ನಡ ಕಲಿಯಲೇಬೇಕಾದ ಅನಿವಾರ್ಯತೆ ಇಲ್ಲ. ಬೇರೆ ಭಾಷೆಯಲ್ಲಿ ಮಾತನಾಡುವವರೊಂದಿಗೆ ನಾವು ಕನ್ನಡದಲ್ಲಿಯೇ ಮಾತನಾಡಬೇಕು.