ಮಂಡ್ಯ: ಶಾಲೆಗೆ ಬರುವ ಮಕ್ಕಳನ್ನು ಶಿಕ್ಷಕರು ತಮ್ಮ ಮಕ್ಕಳಂತೆ ಭಾವಿಸಿ: ನಗರದಲ್ಲಿ ಡಿಸಿ ಡಾ.ಕುಮಾರ
Mandya, Mandya | Oct 6, 2025 ಶಾಲೆಗೆ ಬರುವ ಮಕ್ಕಳನ್ನು ಶಿಕ್ಷಕರು ತಮ್ಮ ಮಕ್ಕಳಂತೆ ಕಾಣಬೇಕು, ನಿಮ್ಮ ಮಕ್ಕಳ ಜೀವನ ರೂಪಿಸುವಲ್ಲಿ ನೀವು ಎಷ್ಟು ಮುಖ್ಯ ಪಾತ್ರ ವಹಿಸುತ್ತಿರೋ ಅಷ್ಟೇ ಪ್ರಮುಖವಾದ ಪಾತ್ರವನ್ನು ನಿಮ್ಮ ಶಾಲೆಗೆ ಬರುವ ವಿದ್ಯಾರ್ಥಿಗಳ ಜೀವನ ರೂಪಿಸಲು ಶ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಹೇಳಿದರು. ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಾಲಮಂದಿರಲ್ಲಿ ಆಯೋಜಿಸಲಾಗಿದ್ದ 10ನೇ ತರಗತಿ ವಿದ್ಯಾರ್ಥಿಗಳ ಫಲಿತಾಂಶ ವಿಶ್ಲೇಷಣೆ ಸಭೆ ಮತ್ತು ಜಿಲ್ಲಾ ಮಟ್ಟದ ಪ್ರೌಢಶಾಲಾ ಮುಖ್ಯ ಶಿಕ್ಷಕರ ಪ್ರಗತಿ ಪರಿಶೀಲಿನ ಸಭೆಯನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಕಳೆದ ವರ್ಷ ರಾಜ್ಯದ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಜಿಲ್ಲೆ 19 ಸ್ಥಾನ ಗಳಿಸಿತ್ತು ಎಂದರಃ.