ಮೈಸೂರು: ನಾಡಹಬ್ಬ ದಸರಾ ಮಹೋತ್ಸವ ಹಿನ್ನೆಲೆ: ಸ್ವಚ್ಚತೆ ಕುರಿತು ಜಾಗೃತಿ ಮೂಡಿಸುವ ನಾಟಕ ಪ್ರದರ್ಶನ
Mysuru, Mysuru | Sep 28, 2025 ನಗರದ ಸಯ್ಯಾಜಿರಾವ್ ರಸ್ತೆಯಲ್ಲಿರುವ ಚಿಕ್ಕ ಗಡಿಯಾರ ಮುಂಭಾಗ ಸ್ವಚ್ಛತೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಬೀದಿ ನಾಟಕ ಪ್ರದರ್ಶನವನ್ನು ಆಯೋಜಿಸಲಾಗಿತ್ತು. ಬೀದಿ ನಾಟಕವನ್ನು ನೇಪಥ್ಯ ರಂಗ ತಂಡದವರು ಬೀದಿ ನಾಟಕವನ್ನು ಪ್ರದರ್ಶಿಸಿದರು. ಮೈಸೂರು ದಸರಾ ಸ್ವಚ್ಛತೆ ಮತ್ತು ವ್ಯವಸ್ಥೆಯ ಉಪಸಮಿತಿ ಅಧ್ಯಕ್ಷ ಸುಭಾನ್, ಉಪಾಧ್ಯಕ್ಷ ವಸಂತ್ ಕುಮಾರ್, ಸದಸ್ಯರಾದ ಮೊಹಮದ್ ಶರೀಫ್, ಹಾಗೂ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.