ಚನ್ನಪಟ್ಟಣ: ಕೋಡಂಬಹಳ್ಳಿ ಕಾಲೇಜಿನಲ್ಲಿ ದತ್ತಿ ಉಪನ್ಯಾಸ ಮತ್ತು ಗೀತಗಾಯನ ಕಾರ್ಯಕ್ರಮ
ಚನ್ನಪಟ್ಟಣದ ಕೋಡಂಬಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಕಸಾಪ ವತಿಯಿಂದ ದತ್ತಿ ಉಪನ್ಯಾಸ ಹಾಗೂ ಗೀತಗಾಯನ ಕಾರ್ಯಕ್ರಮ ನಡೆಯಿತು. ಈ ವೇಳೆ ಸಾವಯವ ಕೃಷಿ ಹಾಗೂ ನೀರಿನ ಸದ್ಬಳಕೆ ಕುರಿತು ಉಪನ್ಯಾಸ ನೀಡಲಾಯಿತು. ಕಾರ್ಯಕ್ರಮದಲ್ಲಿ ಜನಪದ ಗಾಯಕರನ್ನು ಸನ್ಮಾನಿಸಲಾಯಿತು.