ಹೊಳಲ್ಕೆರೆ: ಪಟ್ಟಣದ ತಾಪಂ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ; ಶಾಸಕ ಚಂದ್ರಪ್ಪ ಭಾಗಿ
ಭಾರತ ದೇಶಕ್ಕೆ ಶ್ರೇಷ್ಠವಾದ ಸಂವಿಧಾನವನ್ನು ಡಾ.ಬಿ.ಆರ್.ಅಂಬೇಡ್ಕರ್ ರಚಿಸಿ ಕೊಟ್ಟಿದ್ದಾರೆ ಎಂದು ಶಾಸಕ ಎಂ.ಚಂದ್ರಪ್ಪ ಹೇಳಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಸೋಮವಾರ ಹಮ್ಕಿಕೊಂಡಿದ್ದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆ, ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು. ಸಂವಿಧಾನದಿಂದ ಎಲ್ಲರಿಗೂ ಸಮಾನದ ಹಕ್ಕುಗಳು ಹಾಗು ಸಮಾಜದಲ್ಲಿ ಸಮಾನತೆ ದೊರೆತಿದೆ ಎಂದರು.ಈ ವೇಳೆ ಪುರಸಭೆ ಅಧ್ಯಕ್ಷ ವಿಜಯಸಿಂಹ ಕಾಟ್ರೋತ್, ಉಪಾಧ್ಯಕ್ಷೆ ನಾಗರತ್ನ ವೇದಮೂರ್ತಿ ಇದ್ದರು.