ಆನೇಕಲ್: ಬಳಗಾರನಹಳ್ಳಿಯಲ್ಲಿ ಗದ್ದಲ ಕೋಲಾಹಲದ ನಡುವೆ ನಡೆದ ನೆರಳೂರು ಪಂಚಾಯಿತಿ ಗ್ರಾಮ ಸಭೆ, ಸಾರ್ವಜನಿಕರು ಹಾಗೂ ಸದಸ್ಯರ ನಡುವೆ ಮಾತಿನ ಚಕಮಕಿ
ಆನೇಕಲ್ ತಾಲೂಕಿನ ನೆರಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಳಗಾರನಹಳ್ಳಿ ಗ್ರಾಮದಲ್ಲಿ ಪಂಚಾಯತಿ ವತಿಯಿಂದ ಗ್ರಾಮಸಭೆ ಆಯೋಜನೆ ಮಾಡಲಾಗಿತ್ತು. ಗ್ರಾಮ ಸಭೆಗೆ ಅಧಿಕಾರಿಗಳು ಗೈರಾದ ಹಿನ್ನೆಲೆಯಲ್ಲಿ ಸಾರ್ವಜನಿಕರು ಗ್ರಾಮ ಸಭೆ ನಡೆಸಿದಂತೆ ಪಂಚಾಯಿತಿ ಸದಸ್ಯರನ್ನ ತರಾಟೆಗೆ ತೆಗೆದುಕೊಂಡರು. ತಹಶೀಲ್ದಾರ್, ಇಓ, ಹಾಗೂ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಸೇರಿದಂತೆ ಹಲವು ಅಧಿಕಾರಿಗಳು ಗ್ರಾಮ ಸಭೆಗೆ ಹಾಜರಾಗಿರಲಿಲ್ಲ. ಹೀಗಾಗಿ ಕಾಟಾಚಾರಕ್ಕೆ ಗ್ರಾಮಸಭೆ ನಡೆಸದಂತೆ ಕೆಲವರು ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಸದಸ್ಯರು ಹಾಗೂ ಸಾರ್ವಜನಿಕರ ನಡುವೆ ಮಾತಿನ ಚಕಮಕಿ ಉಂಟಾಗಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.