ಹುಣಸಗಿ: ಗುಳಬಾಳ ಗ್ರಾಮದ ಸರ್ಕಾರಿ ಶಾಲೆಯ ಬಿಸಿಯೂಟದಲ್ಲಿ ಹುಳುಗಳು ಪತ್ತೆ, ಆತಂಕ ವ್ಯಕ್ತಪಡಿಸಿರುವ ವಿದ್ಯಾರ್ಥಿಗಳು
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಗುಳಬಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಮಧ್ಯಾಹ್ನ ಬಿಸಿ ಊಟದಲ್ಲಿ ಹುಳುಗಳು ಪತ್ತೆಯಾಗಿದ್ದು ವಿದ್ಯಾರ್ಥಿಗಳು ಆತಂಕಗೊಂಡಿದ್ದಾರೆ. ಊಟದಲ್ಲಿ ಹುಳುಗಳು ಕಾಣುತ್ತಿದ್ದಂತೆ ಆಹಾರ ಸೇವಿಸುವುದು ನಿಲ್ಲಿಸಿರುವ ವಿದ್ಯಾರ್ಥಿಗಳು, ಹುಳು ಪತ್ತೆಯಾಗಿರುವ ಅನ್ನವನ್ನು ತಟ್ಟೆಯಲ್ಲಿ ಹಿಡಿದುಕೊಂಡು ಆತಂಕ ವ್ಯಕ್ತಪಡಿಸಿದ್ದಾರೆ. ಸರಿಯಾದ ರೀತಿಯಲ್ಲಿ ಗಮನಿಸದೇ ಮಾಡಿರುವುದರಿಂದ ಹುಳುಗಳು ಕಾಣಿಸಿಕೊಂಡಿದ್ದು ವಿದ್ಯಾರ್ಥಿಗಳಿಗೆ ಏನಾದರೂ ತೊಂದರೆ ಉಂಟಾದಲ್ಲಿ ಸಂಬಂಧಪಟ್ಟವರೇ ಹೊಣೆಯಾಗಿಲಿದ್ದಾರೆ ಎಂದು ಪೋಷಕರು ಬೇಸರ ವ್ಯಕ್ತಪಡಿಸಿದ್ದಾರೆ.