ಶೋರಾಪುರ: ಕೆಂಭಾವಿ ಪಟ್ಟಣದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಉದ್ಘಾಟನೆ ಹಾಗೂ ದೇವಸ್ಥಾನದ ಅಡಿಗಲ್ಲು ಸಮಾರಂಭ
ಪಟ್ಟಣದ ಪ್ರಥಮ ದರ್ಜೆ ಕಾಲೇಜಿನ ನೂತನ ಸಭಾಂಗಣ ಹಾಗೂ ಗ್ರಂಥಾಲಯ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಪಟ್ಟಣದಲ್ಲಿ ಶ್ರೀ ಮತಿ ಗಂಗಾಬಾಯಿ ಶಾಂತಗೌಡ ಪೋ|| ಪಾಟೀಲ ಮೆಮೋರಿಯಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸುಮಾರು 1.20 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ನೂತನ ಸಭಾಂಗಣ ಮತ್ತು ಗ್ರಂಥಾಲಯದ ಉದ್ಘಾಟನೆ ಹಾಗೂ ಪ್ರಯೋಗಿಕ ಕೋಣೆಗಳ ಶಿಲಾನ್ಯಾಸ ಕಾರ್ಯಕ್ರಮವನ್ನು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಶರಣಬಸಪ್ಪಗೌಡ ದರ್ಶನಾಪುರ ಅವರು ಲೋಕಾರ್ಪಣೆ ಮಾಡಿ ನಂತರ. ಸಚಿವರು ಮಾತನಾಡಿ ಕಾಲೇಜು ನಿರ್ಮಾಣಕ್ಕೆ ಭೂಮಿಯನ್ನು ನೀಡಿದವರು ಕುರಿತು ಕೊಂಡಾಡಿದರು.