ಬೆಂಗಳೂರು ನಗರದ ನೃಪತುಂಗ ರಸ್ತೆಯಲ್ಲಿರುವ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಇಂದು ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಭಾಗವಹಿಸಿದರು. ಸಮಾವೇಶದಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆ ಮತ್ತಷ್ಟು ಬಲಪಡಿಸುವುದು, ಡ್ರಗ್ಸ್ ದಂಧೆ ಮತ್ತು ಸೈಬರ್ ಅಪರಾಧಗಳ ಹಾವಳಿಯನ್ನು ಸಂಪೂರ್ಣವಾಗಿ ನಿಯಂತ್ರಿಸಲು ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳುವ ಕುರಿತು ಸುದೀರ್ಘ ಚರ್ಚೆ ನಡೆಯಿತು. ಬೆಂಗಳೂರು ನಗರದಲ್ಲಿ ಸುಗಮ ಸಂಚಾರ ವ್ಯವಸ್ಥೆ ಜಾರಿಗೆ ತರುವುದರೊಂದಿಗೆ ಅಕ್ರಮ ವಿದೇಶಿ ಪ್ರಜೆಗಳನ್ನು ಗಡಿಪಾರು ಮಾಡುವ ವಿಷಯಗಳ ಮೇಲೂ ಗಮನ ಹರಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಅವರು ಪೊಲೀಸ್ ಅಧಿಕಾರಿಗಳಿಗೆ ಕಾನೂನು ಜಾರಿಯಲ್ಲಿ ಯಾವುದೇ ಸಡಿಲತೆ ಇಲ್ಲದೆ ಕರ್ತವ್ಯ