ರೈತರ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಎನ್ ಎಚ್ ಕೋನರಡ್ಡಿ ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಸಂಜೆ 5 ಗಂಟೆಗೆ ರೈತರ ಸಮಸ್ಯೆಗಳ ಕುರಿತು ಅಧಿಕಾರಿಗಳ ಸಭೆ ನಡೆಸಿ ಮಾತನಾಡಿ ಅವರು, ರೈತರು ಬೆಳೆದ ಬೆಳೆಗಳನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿ ಕೇಂದ್ರ ಆರಂಭಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ. ಈ ಕುರಿತು ಅಗತ್ಯ ಸಿದ್ಧತೆಗಳನ್ನು ಅಧಿಕಾರಿಗಳು ಮಾಡಿಕೊಳ್ಳಬೇಕು ಎಂದು