ಬಸವತತ್ವ ಹಾಗೂ ಲಿಂಗಾಯತ ಮಠಾಧೀಶರ ಒಕ್ಕೂಟದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಮಹಾರಾಷ್ಟ್ರದ ಕನ್ನೇರಿ ಕಾಡಸಿದ್ದೇಶ್ವರ ಮಠದ ಶ್ರೀ ಸಿದ್ಧೇಶ್ವರ ಸ್ವಾಮೀಜಿ ವಿರುದ್ಧ ಜಾಗತಿಕ ಲಿಂಗಾಯತ ಮಹಾಸಭಾ, ರಾಷ್ಟ್ರೀಯ ಬಸವದಳ ಹಾಗೂ ಬಸವ ಕೇಂದ್ರದ ಸದಸ್ಯರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.