ಕೃಷ್ಣರಾಜಪೇಟೆ: ಸೆ. 20ರಂದು ಪಟ್ಟಣದಲ್ಲಿ ಹಿಂದೂ ಮಹಾಗಣಪತಿಯ ವಿಸರ್ಜನೆ, ಬಿಗಿ ಪೊಲೀಸ್ ಬಂದೋಬಸ್ತ್ : ಪಟ್ಟಣದಲ್ಲಿ ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ
ಸೆ. 20ರಂದು ಕೆ.ಆರ್.ಪೇಟೆ ಪಟ್ಟಣದಲ್ಲಿ ಹಿಂದೂ ಮಹಾಗಣಪತಿಯ ವಿಸರ್ಜನೆಗೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದರು. ಸೆಪ್ಟೆಂಬರ್ 20ರಂದು ಕೆ.ಆರ್. ಪೇಟೆ ಪಟ್ಟಣದಲ್ಲಿ ಹಿಂದೂ ಮಹಾಗಣಪತಿಯ ವೈಭವದ ಮೆರವಣಿಗೆ ಹಾಗೂ ಶೋಭಾ ಯಾತ್ರೆ ಹಾಗೂ ಸೆಪ್ಟೆಂಬರ್ 28ರಂದು ಈದ್ ಮಿಲಾದ್ ಕಾರ್ಯಕ್ರಮವು ಇರುವುದರಿಂದ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಮಲ್ಲಿಕಾರ್ಜುನ ಬಾಲದಂಡಿ ಅವರ ಅಧ್ಯಕ್ಷತೆಯಲ್ಲಿ ಹಿಂದೂ ಮುಸ್ಲಿಂ ಬಾಂಧವರ ಸಾಮರಸ್ಯ ಸಭೆಯು ಪಟ್ಟಣ ಪೊಲೀಸ್ ಠಾಣೆಯ ಆವರಣದಲ್ಲಿ ನಡೆಯಿತು. ಕೋಮು ಸೌಹಾರ್ದತೆಗೆ ಕೃಷ್ಣರಾಜಪೇಟೆ ತಾಲೂಕು ರಾಜ್ಯದಲ್ಲಿಯೇ ಮಾದರಿಯಾಗಿದೆ. ಹಿಂದೂಗಳು ಮತ್ತು ಮುಸ್ಲಿಂ