ಬಂಟ್ವಾಳ: ಸಾಲದ ಹಣ ಕೇಳಿದ್ದಕ್ಕೆ ಚೂರಿ ಇರಿತ, ಆರೋಪಿ ಅಜಿತ್ ಕುಮಾರ್ ಶೆಟ್ಟಿ ವಶಕ್ಕೆ
ಬಂಟ್ವಾಳದಲ್ಲಿ ಹಣದ ವಿಚಾರಕ್ಕೆ ಉದಯ್ ಎಂಬುವವರ ಮೇಲೆ ಚೂರಿಯಿಂದ ಹಲ್ಲೆ ನಡೆಸಲಾಗಿದೆ. ಆರೋಪಿ ಅಜಿತ್ ಕುಮಾರ್ ಶೆಟ್ಟಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗಾಯಗೊಂಡ ಉದಯ್ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.