ಹಾಸನ: ನಗರದಲ್ಲಿ ಹೊಯ್ಸಳ ರಾಜ್ಯ ಸರ್ಕಾರಿ ನೌಕರರ ಗ್ರಹನಿರ್ಮಾಣ ಸಹಕಾರ ಸಂಘದ ವಾರ್ಷಿಕ ಸಭೆ, ಪ್ರತಿಭಾ ಪುರಸ್ಕಾರ
Hassan, Hassan | Sep 25, 2025 ಹಾಸನ: ಒಂದು ಸಂಘ ಅಥವಾ ಸಂಸ್ಥೆಗಳು ಯಶಸ್ವಿಯಾಗಿ ಮುನ್ನಡೆಯಲು ಆ ಸಂಘದ ನಿರ್ದೇಶಕರು ಮತ್ತು ಸದಸ್ಯರೇ ಶಕ್ತಿ ಎಂದು ಹೊಯ್ಸಳ ರಾಜ್ಯ ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಬಿ.ಕೆ ರುದ್ರಪ್ಪ ಹೇಳಿದರು. ನಗರದ ಎಂ.ಜಿ ರಸ್ತೆಯಲ್ಲಿ ಇರುವ ವಿಶ್ವೇಶ್ವರಯ್ಯ ಭವನದಲ್ಲಿ ಇಂದು ಆಯೋಜಿಸಲಾಗಿದ್ದ ಹೊಯ್ಸಳ ರಾಜ್ಯ ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಮತ್ತು ಉತ್ತಮ ಸೇವೆ ಸಲ್ಲಿಸಿದ ನೌಕರರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.ಕಳೆದ ಮೂರು ವರ್ಷಗಳಿಂದ ಸಂಘ ಸ್ಥಾಪನೆಯಾದ ಉದ್ದೇಶದಂತೆ ಪಾರದರ್ಶಕ ಆಡಳಿತ ಮಾಡಿಕೊಂಡು ಬಂದಿದೆ ಎಂದರು