ದಾಂಡೇಲಿ : ನಗರದ ವಿವಿದೆಡೆಗಳಲಿ ವಿವಿಧ ದಲಿತಪರ ಸಂಘಟನೆಗಳಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಮಹಾಪರಿನಿರ್ವಾಹಣ ದಿನಾಚರಣೆಯನ್ನು ಶನಿವಾರ ಬೆಳಿಗ್ಗೆ 10.30 ಗಂಟೆ ಸುಮಾರಿಗೆ ಆಚರಿಸಲಾಯ್ತು. ದಾಂಡೇಲಿ ನಗರಸಭೆಯ ಆವರಣದಲ್ಲಿರುವ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ವಿವಿಧ ದಲಿತ ಪರ ಸಂಘಟನೆಗಳಿಂದ ಮಾಲಾರ್ಪಣೆ ಮಾಡಿ ಗೌರವ ನಮನಗಳನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವಿವಿಧ ದಲಿತ ಪರ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. ನಗರದ ಆದಿ ಜಾಂಬವಂತ ಸಂಘದ ಕಾರ್ಯಾಲಯದಲ್ಲಿಯೂ ಅಂಬೇಡ್ಕರ್ ಮಹಾಪರಿನಿರ್ವಾಣ ದಿನಾಚರಣೆಯನ್ನು ಆಚರಿಸಲಾಯ್ತು.