ಕಲಬುರಗಿ: ರೈತಪರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಗರದಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ
ಬೆಳಗಾವಿ ಮಾದರಿಯಲ್ಲಿ ಕಬ್ಬಿಗೆ ಬೆಂಬಲ ಬೆಲೆ ನಿಗದಿ, ಸಕ್ಕರೆ ಕಾರ್ಖಾನೆಗಳ ಮುಂಭಾಗದಲ್ಲಿ ವೇ ಬ್ರಿಜ್ ತೂಕದ ಮಾಪನ ಅಳವಡಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ಮಂಗಳವಾರ ನಾಲ್ಕು ಗಂಟೆಗೆ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನೆ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ರವಾನಿಸಲಾಯಿತು..