ಕಾರವಾರದ ಮೆಡಿಕಲ್ ಕಾಲೇಜ ಆಸ್ಪತ್ರೆಯ ನೂತನ ಕಟ್ಟಡದಲ್ಲಿ ಯಾವುದೆ ಸೌಲಭ್ಯ ಕಲ್ಪಿಸದೆ ಬರಿಗೈಯಲ್ಲಿ ಮುಖ್ಯಮಂತ್ರಿ ಉದ್ಘಾಟನೆಗೆ ಬಂದರೆ ಜಿಲ್ಲೆಯಾದ್ಯಂತ ಉಗ್ರ ಪ್ರತಿಭಟನೆಯ ಸ್ವಾಗತ ಎದುರಾಗಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಶುಕ್ರವಾರ ಸಂಜೆ 7ಕ್ಕೆ ಪತ್ರಿಕಾ ಹೇಳಿಕೆ ನೀಡಿರುವ ಅವರು ಆಸ್ಪತ್ರೆಗೆ ಯಾವುದೆ ಸೌಲಭ್ಯ ಕಲ್ಪಿಸದ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.