ಬೆಂಗಳೂರು ಪೂರ್ವ: ರಾಜಕೀಯ ಬೆಳವಣಿಗೆಗಳ ಬಗ್ಗೆ ನಾನು ಮಾತಾಡೋದಿಲ್ಲ, ಅದಕ್ಕೆ ಹೈಕಮಾಂಡ್ ಇದೆ: ನಗರದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್
ಸದ್ಯದ ರಾಜಕೀಯ ಬೆಳವಣಿಗಳ ಬಗ್ಗೆ ನಾನು ಮಾತನಾಡುವುದಿಲ್ಲ. ಅದೇನಿದ್ದರೂ ಹೈಕಮಾಂಡ್ ಗೆ ಬಿಟ್ಟ ವಿಚಾರ. 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಪುನಃ ಅಧಿಕಾರಕ್ಕೆ ತರುವುದೇ ನಮಗೆಲ್ಲರಿಗೂ ಮುಖ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ಕಾವೇರಿ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನವೆಂಬರ್ 28 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವದ ಸಿದ್ಧತೆಯಲ್ಲಿ ತೊಡಗಿಕೊಂಡಿದ್ದೇನೆ. ಬೆಳಗ್ಗೆ ಮುಖ್ಯಮಂತ್ರಿಗಳಿಗೆ ಆಮಂತ್ರಣ ನೀಡಿ ಬಂದೆ, ಈಗ ಉಪ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಿದ್ದೇನೆ. ಹಾಗಾಗಿ ಬೇರೆ ವಿಷಯಗಳ ಬಗ್ಗೆ ನಾನೇನು ಮಾತನಾಡಲಾರೆ ಎಂದರು.