ಹಳಿಯಾಳ : ಪಟ್ಟಣದಲ್ಲಿರುವ ಶಾಸಕರ ಗೃಹ ಕಚೇರಿಯಲ್ಲಿ ಜೋಯಿಡಾ ತಾಲೂಕಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಹಾಗೂ ಜನರ ದೈನಂದಿನ ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪ್ರಾಂತ ರೈತ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರೊಂದಿಗೆ ಶಾಸಕ ಆರ್.ವಿ.ದೇಶಪಾಂಡೆಯವರು ಶನಿವಾರ ಸಂಜೆ 4.00 ಗಂಟೆ ಸುಮಾರಿಗೆ ಮಹತ್ವದ ಸಭೆಯನ್ನು ನಡೆಸಿದರು. ಈ ಸಂದರ್ಭದಲ್ಲಿ ಜೋಯಿಡಾ ತಾಲೂಕಿನ ಕ.ಪ್ರಾ.ರೈತ ಸಂಘದ ಪದಾಧಿಕಾರಿಗಳೊಂದಿಗೆ ದೇಶಪಾಂಡೆಯವರು ಚರ್ಚೆ ನಡೆಸಿದರು. ಜೋಯಿಡಾ ತಾಲೂಕಿನಲ್ಲಿ ರಸ್ತೆ, ಕುಡಿಯುವ ನೀರು, ವಿದ್ಯುತ್, ಆರೋಗ್ಯ ಹಾಗೂ ಶಿಕ್ಷಣ, ಅತಿಕ್ರಮಣ ಸೇರಿದಂತೆ ಗ್ರಾಮೀಣ ಪ್ರದೇಶಗಳಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳ ಕೊರತೆಗಳ ಕುರಿತು ಸವಿಸ್ತಾರವಾಗಿ ಚರ್ಚಿಸಿದರು.