ಮಂಗಳೂರು: 2019ರ ರಾಕೇಶ್ ಕೊಲೆ ಪ್ರಕರಣ: ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಮಂಗಳೂರು ನ್ಯಾಯಾಲಯ
2019ರಲ್ಲಿ ನಡೆದ ರಾಕೇಶ್ ಕೊಲೆ ಪ್ರಕರಣದ ತೀರ್ಪು ಪ್ರಕಟವಾಗಿದೆ. ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ಮತ್ತೊಬ್ಬ ಆರೋಪಿಗೆ ಜೈಲು ಶಿಕ್ಷೆ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.