ಶಿವಮೊಗ್ಗ: ವೀರಗಾರನ ಬೈರನಕೊಪ್ಪ ಬಳಿ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು
ಶಿವಮೊಗ್ಗ ತಾಲೂಕಿನ ವೀರಗಾರನ ಬೈರನಕೊಪ್ಪ ಬಳಿ ಡಿಸೆಂಬರ್ 10ರಂದು ಖಾಸಗಿ ಬಸ್ ಹಾಗೂ ಕಾರಿನ ನಡುವೆ ನಡೆದಿದ್ದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಕುರಿತಾದ ಮಾಹಿತಿ ಶನಿವಾರ ಲಭ್ಯವಾಗಿದೆ. ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿ ಮೂಲದ ಶ್ರೀನಿವಾಸ್ ಈ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು ಅವರನ್ನ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶ್ರೀನಿವಾಸ್ ಮೃತಪಟ್ಟಿದ್ದಾರೆ. ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.