ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ತಾವರೆಕೆರೆಗೆ ಶನಿವಾರ ಉರುಳಿಬಿದ್ದಿದ್ದು ಭಾನುವಾರ ಬೆಳಿಗ್ಗೆ 8 ಗಂಟೆಗೆ ಈ ಬಗ್ಗೆ ಮಾಹಿತಿ ಲಭ್ಯವಾಗಿದೆ. ಹಾಸನದಿಂದ ಕೊಲ್ಲೂರಿಗೆ ತೆರಳುತ್ತಿದ್ದ ಮಾರುತಿ ಆಲ್ಟೋ ಕಾರು ತಾವರೆಕೆರೆ ಬಳಿಯಲ್ಲಿ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದೆ. ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ಏಕಾಏಕಿ ಕೆರೆಗೆ ಉರುಳುತ್ತಿದ್ದಂತೆ ಸ್ಥಳೀಯರು ಸಹಾಯಕ್ಕೆ ಧಾವಿಸಿ ಕಾರಲ್ಲಿದ್ದವರನ್ನು ಸುರಕ್ಷಿತವಾಗಿ ಮೇಲಕ್ಕೆತ್ತಿದ್ದಾರೆ. ರಿಪ್ಪನ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.