ಕಲಬುರಗಿ: ಎಲ್ಲ ಧರ್ಮದವರು ಸಂವಿಧಾನ ಅಡಿಯಲ್ಲಿ ಬದುಕುತ್ತಿದ್ದಾರೆ: ನಗರದಲ್ಲಿ ಕೇಂದ್ರ ಮಾಜಿ ಸಚಿವ ಸಿಎಂ ಇಬ್ರಾಹಿಂ
ಕಲಬುರಗಿ : ಮುಸಲ್ಮಾನರು, ದಲಿತರು ಸೇರಿದಂತೆ ಪ್ರತಿಯೊಬ್ಬರು ಈ ದೇಶದ ಸಂವಿಧಾನದ ಅಡಿಯಲ್ಲಿ ಬದುಕುತ್ತಿದ್ದಾರೆ ಅಂತಾ ಕೇಂದ್ರ ಮಾಜಿ ಸಚಿವ ಸಿಎಂ ಇಬ್ರಾಹಿಂ ಹೇಳಿದ್ದಾರೆ.. ನ7 ರಂದು ಮಧ್ಯಾನ 1 ಗಂಟೆಗೆ ಕಲಬುರಗಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನಲ್ಲಿ ಮುಸ್ಲಿಂರನ್ನ ದುರ್ಬಳಕೆ ಮಾಡಿಕೊಳ್ಳಲಾಗ್ತಿದೆಯೆಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಇಬ್ರಾಹಿಂ, ಮುಸ್ಲಿಂರು ನಮಗೆ ಬಿಟ್ಟು ಇನ್ಯಾರಿಗೆ ಕೊಡ್ತಾರೆ ವೋಟು ಅಂತಾ ಹೇಳಿದರು.. ಇನ್ನೂ ನಾನು ಯಾವ ಪಕ್ಷಕ್ಕೆ ಸೇರ್ಪಡೆಗೊಳ್ಳಬೇಕು ಅನ್ಮೊದರ ಬಗ್ಗೆ ನ15 ಬಳಿಕ ತೀರ್ಮಾನ ಕೈಗೊಳ್ಳೊದಾಗಿ ಸಿಎಂ ಇಬ್ರಾಹಿಂ ಹೇಳಿದ್ದಾರೆ.