ಹಡಗಲಿ: ಪಟ್ಟಣದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ ಶಾಸಕ ಕೃಷ್ಣ ನಾಯ್ಕ್ ಭಾಗಿ
ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಪಟ್ಟಣದಲ್ಲಿ ಇಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮವನ್ನು ಹೂವಿನ ಹಡಗಲಿಯ ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯಿತಿ ಸೇರಿದಂತೆ ವಿವಿಧ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿತ್ತು ಕಾರ್ಯಕ್ರಮಕ್ಕೆ ಶಾಸಕರಾದ ಕೃಷ್ಣ ನಾಯ್ಕ್ ಚಾಲನೆ ನೀಡಿದರು ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಇತರರು ಪಾಲ್ಗೊಂಡಿದ್ದರು.