ಖಾಸಗಿ ಶಾಲಾ ಬಸ್ ಹಾಗೂ ಬೈಕ್ ನಡುವೆ ತೀರ್ಥಹಳ್ಳಿ ತಾಲೂಕಿನ ಕುಶಾವತಿ ಸಮೀಪ ಅಪಘಾತ ಸಂಭವಿಸಿದ್ದು ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು ತೀರ್ಥಹಳ್ಳಿ ಆಸ್ಪತ್ರೆಗೆ ರವಾನೆ ಮಾಡಿರುವ ಘಟನೆ ಶನಿವಾರ ಬೆಳಿಗ್ಗೆ 10 ಗಂಟೆಗೆ ನಡೆದಿದೆ. ಕುಶಾವತಿ ರಸ್ತೆ ತಿರುವಿನಲ್ಲಿ ಶಿವಮೊಗ್ಗದಿಂದ ದಾವಣಗೆರೆಯ ಹೊನ್ನಾಳಿಯ ಶಾಲಾ ಪ್ರವಾಸದ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಬಸ್ ಚಾಲಕ ಅತೀ ವೇಗದಿಂದ ಅಪಾಯಕಾರಿ ತಿರುವಿನಲ್ಲಿ ನಿಯಂತ್ರಣಕ್ಕೆ ಬಾರದೇ ಬೈಕ್ ಸವಾರನ ಮೇಲೆ ಹತ್ತಿದೆ. ಕನಿಷ್ಠ 10 ಮೀಟರ್ ತನಕ ಬಸ್ಸಿನ ಅಡಿಯಲ್ಲೇ ಬೈಕ್ ರಸ್ತೆ ಉಜ್ಜಿದ್ದು, ಬೈಕ್ ಸವಾರ ಗಂಭೀರ ಸ್ಥಿತಿಯಲ್ಲಿದ್ದು, ತಕ್ಷಣವೇ ಸ್ಥಳೀಯರು ಆಸ್ಪತ್ರೆ ದಾಖಲಿಸಿದ್ದಾರೆ.