ಪಂಚ ಗ್ಯಾರಂಟಿ ಯೋಜನೆಗಳ ಕುರಿತು ನಗರದಲ್ಲಿ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕುರಿತು ಕೋಲಾರ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯನ್ನು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬೆಂಗಳೂರು ವಿಭಾಗದ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಸೂರಜ್ ಎಮ್.ಎನ್.ಹೆಗಡೆ ನೇತೃತ್ವದಲ್ಲಿ ಬುಧವಾರ ಮಧ್ಯಾಹ್ನ 12 ಗಂಟೆಯಲ್ಲಿ ನಡೆಯಿತು. ಪ್ರಗತಿ ಪರಿಶೀಲನಾ ಸಭೆಯಲ್ಲಿ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಫಲಾನುಭವಿಗಳು, ಹೊಸ ಪಡಿತರ ಚೀಟಿ, ಆಹಾರ ಧಾನ್ಯಗಳ ಸಂಗ್ರಹಣೆ ಮತ್ತು ಬೇಡಿಕೆಗಳ ಬಗ್ಗೆ ಚರ್ಚೆ ಮಾಡ