ಕುಂದಗೋಳದ ಅಜ್ಜನ ಭಾವಿ ಮಾರ್ಕೆಟ್ ರೋಡ್ ನಲ್ಲಿ ಸರ್ಕಾರದ ಎಸ್.ಎಫ್.ಸಿ ವಿಶೇಷ ಅನುದಾನ ಯೋಜನೆಯ ಸುಮಾರು ರೂ. 40 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡ "ರಂಗ ಮಂದಿರ' ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಶಾಸಕರಾದ ಎಂ.ಆರ್.ಪಾಟೀಲ್ ಅವರು ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಸ್ಥಾಯಿ ಸಮಿತಿ ಚೇರಮನ್ನರು, ಅಧಿಕಾರಿಗಳು ಹಾಗೂ ಗ್ರಾಮದ ಗುರುಹಿರಿಯರು ಮತ್ತು ಪಕ್ಷದ ಮುಖಂಡರು ಉಪಸ್ಥಿತರಿದ್ದರು.