ಶಿವಮೊಗ್ಗ: ಕಟ್ಟಡ ಕಾರ್ಮಿಕರ ಸಮಸ್ಯೆ ಮತ್ತು ಬೇಡಿಕೆ ಈಡೇರಿಸುವಂತೆ ಶಿವಮೊಗ್ಗ ನಗರದಲ್ಲಿ ಪ್ರತಿಭಟನೆ
ಕಟ್ಟಡ ಕಾರ್ಮಿಕರ ಹಲವಾರು ಸಮಸ್ಯೆಗಳು ಮತ್ತು ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಅಖಿಲ ಕರ್ನಾಟಕ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕರ ಒಕ್ಕೂಟದ ಜಿಲ್ಲಾ ಶಾಖೆ ವತಿಯಿಂದ ಸೋಮವಾರ ಬೃಹತ್ ಪ್ರತಿಭಟನೆಯನ್ನು ನಡೆಸಿ ಕಾರ್ಮಿಕರ ಅಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು. ಶಿವಮೊಗ್ಗದ ವಿನೋಬನಗರದ ಪೊಲೀಸ್ ಚೌಕಿಯಿಂದ ಸೂಡ ಸಂಕೀರ್ಣದಲ್ಲಿರುವ ಕಾರ್ಮಿಕ ಕಚೇರಿವರಿಗೆ ನೂರಾರು ಸಂಖ್ಯೆಯಲ್ಲಿ ಆಗಮಿಸಿದ ಪ್ರತಿಭಟನಾಕಾರರು ತಮ್ಮ ಬೇಡಿಕೆಗಳನ್ನ ಈಡೇರಿಸುವಂತೆ ಒತ್ತಾಯಿಸಿದರು.