ಮುಧೋಳ: ನಗರದಲ್ಲಿ ಯಶಸ್ವಿಯಾಗಿ ಜರುಗಿದ ಮನೆಮನೆಗೆ ಪೊಲೀಸ್ ಅಭಿಯಾನ
ಸಮುದಾಯ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವ ಹಾಗೂ ಸಮಾಜಕ್ಕೆ ಉತ್ತಮ ಸಕ್ರಿಯ ಪೊಲೀಸ್ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಮಹತ್ವಾಕಾಂಕ್ಷೆಯ ಯೋಜನೆಯಾದ “ಮನೆ-ಮನೆಗೆ ಪೊಲೀಸ್" ಪರಿಕಲ್ಪನೆಯನ್ನು ಬಾಗಲಕೋಟೆ ಜಿಲ್ಲೆಯಾದ್ಯಂತ ಅನುಷ್ಠಾನಗೊಳಿಸಲಾಗುತ್ತಿದ್ದು,ಮುಧೋಳ ನಗರದಲ್ಲಿ ಅಭಿಯಾನವನ್ನ ಯಶಸ್ವಿಯಾಗಿ ನೆರವೇರಿಸಲಾಯಿತು.