ಹೊಳೆ ನರಸೀಪುರ: ಹಾಸನ: ಅಪಘಾತದಲ್ಲಿ ಮೃತಪಟ್ಟ ಇಂಜಿನಿಯರ್ ರವಿ ಅಂಗಾಂಗ ದಾನ ಮಾಡಿದ ಪೋಷಕರು
ಹಾಸನದ ಹೊಳೆನರಸೀಪುರ ತಾಲ್ಲೂಕಿನ ಚಾಕೇನಹಳ್ಳಿ ಕಟ್ಟೆ ಗ್ರಾಮದ ನಿವಾಸಿ, ಇಂಜಿನಿಯರ್ ರವಿ ಅವರ ಅಂಗಾಂಗಗಳನ್ನು ಪೋಷಕರು ದಾನ ಮಾಡಿದ್ದಾರೆ. ಹಿಟ್ ಅಂಡ್ ರನ್ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ನಿಧನರಾದ ರವಿ, ವಿಪ್ರೋದಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು.