ಶಿವಮೊಗ್ಗ: ಡೆಂಗ್ಯೂ ಪ್ರಕರಣಗಳ ನಿಯಂತ್ರಣ ಪರಿಣಾಮಕಾರಿಯಾಗಿ ಆಗಬೇಕು, ನಗರದಲ್ಲಿ ಶಾಸಕ ಚನ್ನಬಸಪ್ಪ
ಡೆಂಗ್ಯೂ ಪ್ರಕರಣಗಳು ಪ್ರತಿನಿತ್ಯ ಉಲ್ಬಣಗೊಳ್ಳುತ್ತಿದ್ದು ಇದನ್ನ ಗಂಭೀರವಾಗಿ ಪರಿಗಣಿಸಿ ನಿಯಂತ್ರಿಸಲು ಅಧಿಕಾರಗಳು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಾಸಕ ಎಸ್ ಎನ್ ಚನ್ನಬಸಪ್ಪ ಅವರು ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ. ಬುಧವಾರ ಶಿವಮೊಗ್ಗ ನಗರದ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಡೆಂಗ್ಯೂ ನಿಯಂತ್ರಣದ ಕುರಿತಾದ ತುರ್ತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಶಿವಮೊಗ್ಗ ನಗರ ಜಿಲ್ಲೆಯ ಮುಖ್ಯ ಕೇಂದ್ರವಾಗಿದ್ದು,ನಗರದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗದಂತೆ ಕಟ್ಟೆ ಚರವಹಿಸಿ, ನಿಯಂತ್ರಣಕ್ಕೆ ಬೇಕಾದ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.