ಚಿತ್ರದುರ್ಗದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಹಾಕುವ ಅವದಿ ವಿಸ್ತರಣೆ ಮಾಡಲಾಯಿತು. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಾದ ಉದ್ಯೋಗಿನಿ, ಚೇತನ, ಧನಶ್ರೀ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ ಮತ್ತು ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಕೆ ಅವಧಿಯನ್ನು 2026ರ ಜನವರಿ 15 ರವರೆಗೆ ವಿಸ್ತರಿಸಲಾಗಿದೆ