ರಾಯಚೂರು: ಇಡಪನೂರು ಗ್ರಾಮದಲ್ಲಿ ಅಂತರಾಷ್ಟ್ರೀಯ ದತ್ತು ಮಾಸಾಚರಣೆ ಕಾರ್ಯಕ್ರಮ
ರಾಯಚೂರು ತಾಲೂಕಿನ ಇಡಪನೂರು ಗ್ರಾಮದಲ್ಲಿ, ಅಂತರಾಷ್ಟ್ರೀಯ ದತ್ತು ಮಾಸಾಚರಣೆ ಕುರಿತು ಇಡಪನೂರು ಗ್ರಾಮದಲ್ಲಿ ಜಾಥ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬುಧವಾರ 10 ಗಂಟೆಗೆ ಇಡಪನೂರಿನ ಸರ್ಕಾರಿ ಪ್ರೌಢ ಶಾಲೆಯಲ್ಲಿ 8, 9, ಮತ್ತು 10ನೇ ತರಗತಿ ಮಕ್ಕಳನ್ನು ಸೇರಿಸಿ ಜಾಗೃತಿ ಮೂಡಿಸಿ, ಪ್ರಾಸ್ತವಿಕವಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಮಾತನಾಡಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಅಂಬರೀಶ್ ಇವರು ಸಸಿಗೆ ನೀರೆರಡದು ಉದ್ಘಾಟಿಸಿ ಮಾತನಾಡುತ್ತಾ, ಮಕ್ಕಳಲ್ಲಿ ತಮ್ಮನ್ನು ತಾವೇ ಹೇಗೆ ರಕ್ಷಿಸಿಕೊಳ್ಳಬೇಕು ಬಾಲ್ಯವಿವಾಹ, ಬಾಲಕಾರ್ಮಿಕ ಮತ್ತು ಮಕ್ಕಳ ಮೇಲಾಗುತ್ತಿರುವ ದೌರ್ಜನ್ಯ ಕುರಿತು ಮಾಹಿತಿಯನ್ನು ತಿಳಿಸಿದರು.