ಕಂಪ್ಲಿ: ಸಮೀಕ್ಷೆ ಸ್ಥಳಗಳಿಗೆ ದಿಢೀರ್ ಭೇಟಿ ಕೊಟ್ಟ ತಹಶಿಲ್ದಾರ್ ಮಂಜುನಾಥ್
Kampli, Ballari | Oct 19, 2025 ಅ.19,ಭಾನುವಾರ ಮಧ್ಯಾಹ್ನ 1ಗಂಟೆಗೆ ಜಿಲ್ಲಾಧಿಕಾರಿಗಳ ನಿರ್ದೇಶನದ ಹಿನ್ನೆಲೆ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕಾರ್ಯಗಳು ಕ್ರಮಬದ್ಧವಾಗಿ ನಡೆಯುತ್ತಿವೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಇಂದು ಕಂಪ್ಲಿ ತಹಶೀಲ್ದಾರ್ ಮಂಜುನಾಥ್ ರವರು ದಿಢೀರ್ ಸ್ಥಳ ಪರಿಶೀಲನೆ ನಡೆಸಿದರು. ಪುರಸಭೆ ಮುಖ್ಯಾಧಿಕಾರಿ ಮಲ್ಲಿಕಾರ್ಜುನ, ಆರ್.ಐ ಜಗದೀಶ್ ಸೇರಿದಂತೆ ಅಧಿಕಾರಿಗಳು ತಹಶೀಲ್ದಾರ್ ರವರೊಂದಿಗೆ ವಿವಿಧ ಸಮೀಕ್ಷೆ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಮೀಕ್ಷೆಯು ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರ ನಿಖರ ಮಾಹಿತಿಯನ್ನು ಸಂಗ್ರಹಿಸುವ ಉದ್ದೇಶ ಹೊಂದಿದ್ದು