ಹುಬ್ಬಳ್ಳಿ ನಗರ: ಹುಬ್ಬಳ್ಳಿ ತಾಲೂಕು ಆಡಳಿತದಿಂದ ಶ್ರೀ ವಿಶ್ವಕರ್ಮ ಜಯಂತಿ ಆಚರಣೆ
ಹುಬ್ಬಳ್ಳಿ : ಇಂದು ತಾಲೂಕು ಆಡಳಿತ ಸೌಧದ ತಹಶೀಲ್ದಾರ ಕಾರ್ಯಾಲಯದ ಸಭಾಂಗಣದಲ್ಲಿ ಹುಬ್ಬಳ್ಳಿ ತಾಲೂಕು ಆಡಳಿತದಿಂದ ಶ್ರೀ ವಿಶ್ವಕರ್ಮ ಜಯಂತಿ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಅರ್ಪಿಸಿ, ಪೂಜೆ ಸಲ್ಲಿಸುವ ಮೂಲಕ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶಾಕೀರ ಸನದಿ, ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರರಾದ ಜೆ.ಬಿ.ಮಜ್ಜಗಿ, ಹುಬ್ಬಳ್ಳಿ ನಗರ ತಹಶೀಲ್ದಾರರಾದ ಮಹೇಶ್ ಭಗವಂತ ಗಸ್ತೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು. ****