ದಲಿತ ಸಾಹಿತ್ಯ ಪರಿಷತ್ತ ರಾಜ್ಯ ಘಟಕ ಗದಗ ಹಾಗೂ ರಾಯಚೂರು ಜಿಲ್ಲಾ ಘಟಕದ ಆಶ್ರಯದಲ್ಲಿ 11ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನ ಡಿಸಂಬರ್ 20, ಹಾಗೂ 21ರಂದು ನಗರದ ಪಂಡಿತ್ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ನಡೆಯಲಿದೆ ಎಂದು ರಾಜ್ಯ ದಲಿತ ಸಾಹಿತ್ಯ ಪರಿಷತ್ತ ಅಧ್ಯಕ್ಷ ಡಾ.ಅರ್ಜುನ ಗೊಳಸಂಗಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಡಾ. ಜಯದೇವಿ ಗಾಯಕವಾಡ ಸರ್ವಾಧ್ಯಕ್ಷರಾಗಿ ಆಗಮಿಸಲಿದ್ದಾರೆ. ವಿಚಾರ ವಿಶೇಷ ಗೋಷ್ಠಿ, ಉಪನ್ಯಾಸ ಮತ್ತು ಸಂವಾದ ಸಾಹಿತ್ಯ, ಸಾಂಸ್ಕೃತಿಕ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮಗಳು ಆಯೋಜಿಸಲಾಗಿದೆ ಎಂದರು.