ಬೇಲೂರು: ಪಟ್ಟಣದಲ್ಲಿ ಗಣೇಶನ ವಿಗ್ರಹಕ್ಕೆ ಚಪ್ಪಲಿ ಹಾರ ಪ್ರಕರಣ: ಪಟ್ಟಣದಲ್ಲಿ ಸಾರ್ವಜನಿಕರಿಂದ ತೀವ್ರ ಆಕ್ರೋಶ, ಪ್ರತಿಭಟನೆ
Belur, Hassan | Sep 21, 2025 ಬೇಲೂರು ನಗರದ ಹೃದಯಭಾಗದಲ್ಲಿ ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ. ಬೇಲೂರಿನ ಪುರಸಭೆ ಆವರಣದಲ್ಲಿರುವ ಶ್ರೀ ವರಸಿದ್ದಿ ವಿನಾಯಕ ದೇವಾಲಯದಲ್ಲಿ ಘಟನೆ ನಡೆದಿದೆ. ವಿಘ್ನ ನಿವಾರಕನಿಗೆ ಎರಡು ಚಪ್ಪಲಿಗಳಿಗೆ ದಾರಕಟ್ಟಿ ಹಾರದಂತೆ ಹಾಕಿದ್ದಾರೆ. ಇಂದು ಮುಂಜಾನೆ ಭಕ್ತರು ದೇವರ ದರ್ಶನಕ್ಕೆ ಹೋಗಿದ್ದಾರೆ. ಈ ವೇಳೆ ಗಣೇಶನ ಮೂರ್ತಿ ನೋಡಿ ಆಘಾತಕ್ಕೆ ಒಳಗಾಗಿದ್ದಾರೆ. ಅಪಮಾನಿಸಿದವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕಿಡಿಗೇಡಿಗಳ ಬಂಧನಕ್ಕೆ ಸ್ಥಳೀಯರು ಆಗ್ರಹಿಸಿದ್ದಾರೆ. ಬೇಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಇಂತಹ ಕೃತಿಯ ಸಿಕ್ಕಿದ್ದವರು ಯಾರೇ ಆದರೂ ಕಠಿಣ ಕ್ರಮ ಕೈಗೊಂಡು ಶಿಕ್ಷೆಗೆ ಗುರಿಪಡಿಸಬೇಕೆಂದು ಆಗ್ರಹಿಸಿದರು.