ಬೆಂಗಳೂರಿನಿಂದ ಬಾಗಲಕೋಟೆಗೆ ಹೊಸದಾಗ ಪ್ರಾರಂಭಿಸಲಾದ ಎಸಿ ಸ್ಲೀಪರ್ ಬಸ್ಗೆ ಬಾಗಲಕೋಟೆ ಹಳೆಯ ಬಸ್ ನಿಲ್ದಾಣದಲ್ಲಿ ಬೀಳಗಿ ಶಾಸಕ ಹಾಗೂ ಹಟ್ಟಿ ಚಿನ್ನದ ಗಣಿ ನಿಯಮಿತದ ಅಧ್ಯಕ್ಷ ಜೆ.ಟಿ.ಪಾಟೀಲ ಹಸಿರು ನಿಶಾನೆ ತೋರುವ ಮೂಲಕ ಶನಿವಾರ ಸಂಜೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಅನೀಲಕುಮಾರ ದಡ್ಡಿ, ತಾಲೂಕಾ ಅಧ್ಯಕ್ಷ ಎಸ್.ಎಂ.ರಾಂಪೂರ, ಸಂಚಾರಿ ನಿಯಂತ್ರಣಾಧಿಕಾರಿ ಲಮಾಣಿ ಸೇರಿದಂತೆ ಇತರರು ಇದ್ದರು.