ಆಲೂರು: ಅಡುಗೆ ಮಾಡಿಲ್ಲವೆಂದು ಹೆತ್ತ ಅಮ್ಮನನ್ನೇ ಹೊಡೆದುಕೊಂದ ಮಗ! ಕದಾಳುಚನ್ನಾಪುರ ಗ್ರಾಮದಲ್ಲಿ ಘಟನೆ
Alur, Hassan | Oct 3, 2025 ಹಾಸನ: ಆಲೂರು ತಾಲ್ಲೂಕಿನ ಕದಾಳುಚನ್ನಾಪುರ ಗ್ರಾಮದಲ್ಲಿ ತಾಯಿ–ಮಗನ ಜಗಳ ತಾಯಿ ಕೊಲೆಯಲ್ಲಿ ಅಂತ್ಯ ಕಂಡಿದೆ. ಕುಡಿದು ಮನೆಗೆ ಬಂದಿದ್ದ ಸಂತೋಷ (19) ಅಡುಗೆ ಮಾಡಿಲ್ಲವೆಂದು ತಾಯಿ ಪ್ರೇಮ (45) ಅವರೊಂದಿಗೆ ಜಗಳಕ್ಕೆ ಇಳಿದಿದ್ದ. ಮಾತಿಗೆ ಮಾತು ಬೆಳೆದು ಕೋಪಗೊಂಡ ಸಂತೋಷ ದೊಣ್ಣೆಯಿಂದ ತಲೆಗೆ ಬಲವಾಗಿ ಹೊಡೆದ ಪರಿಣಾಮ ತಾಯಿ ಗಂಭೀರವಾಗಿ ಗಾಯಗೊಂಡರು.ಕುಟುಂಬಸ್ಥರು ಅವರನ್ನು ತಕ್ಷಣ ಹಿಮ್ಸ್ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆಗೆ ಸ್ಪಂದಿಸದೆ ಇಂದು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.