ಜಿಲ್ಲಾ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ 2025ರ ಡಿಸೆಂಬರ್ ಮಾಹೆಗೆ ಪಡಿತರ ಧಾನ್ಯಗಳನ್ನು ವಿತರಣೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ತಿಳಿಸಿದ್ದಾರೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯ ಕೇಂದ್ರ ವ್ಯಾಪ್ತಿಯ ಪ್ರತಿ ಅಂತ್ಯೋದಯ ಚೀಟಿಗೆ 35 ಕೆ.ಜಿ, ಬಿಪಿಎಲ್ ಪಡಿತರ ಚೀಟಿಯಲ್ಲಿನ ಪ್ರತಿ ಫಲಾನುಭವಿಗೆ 05 ಕೆ.ಜಿ ಅಕ್ಕಿ ಇದರ ಜೊತೆಗೆ ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿಯಲ್ಲಿ ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ ನಾಲ್ಕು ಮತ್ತು ನಾಲ್ಕಕಿಂತ ಹೆಚ್ಚಿನ ಸದಸ್ಯರುಳ್ಳ ಕೇಂದ್ರ &ರಾಜ್ಯ ವ್ಯಾಪ್ತಿಯ ಅಂತ್ಯೋದಯ ಮತ್ತು ಬಿಪಿಎಲ್ ಪಡಿತರ ಚೀಟಿಯ ಪ್ರತಿ ಫಲಾನುಭವಿಗೆ ಹೆಚ್ಚುವರಿಯಾಗಿ 05ಕೆ.ಜಿ ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುವುದು ಎಂದರು