ಕಮಲನಗರ: ಪಟ್ಟಣದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಾಸಕ ಪ್ರಭು ಚೌಹಾಣ್ ಭೇಟಿ ಸಿಬ್ಬಂದಿ ಕರ್ತವ್ಯ ಜವಾಬ್ದಾರಿ ಕುರಿತು ಬೇಸರ
ಪಟ್ಟಣದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕ್ಷೇತ್ರದ ಶಾಸಕ ಪ್ರಭು ಚೌಹಾಣ್ ಅವರು ಶನಿವಾರ ಮಧ್ಯಾಹ್ನ 1ಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಸಿಬ್ಬಂದಿ ಹಾಜರಿ ಪುಸ್ತಕ ಪರಿಶೀಲಿಸಿ ಗೈರಾದ ಸಿಬ್ಬಂದಿ ಬಗ್ಗೆ ಬೇಸರ ವ್ಯಕ್ತಪಡಿಸಿದ್ದರು. ಸಿಬ್ಬಂದಿ ಕರ್ತವದ ಮೇಲೆ ಗಮನ ಇಡುವಂತೆ ಇಲಾಖೆ ಮೇಲಾಧಿಕಾರಿಗಳ ಜೊತೆ ಮಾತನಾಡಿದರು. ತಾಲೂಕು ಅರೋಗ್ಯ ಅಧಿಕಾರಿ ಡಾ. ಗಾಯತ್ರಿ ಮತ್ತಿತರರಿದ್ದರು.